
ಇಳಕಲ್ನ ಶ್ರೀ ವಿಜಯ ಮಹಾಂತೇಶ ಮಹಿಳಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ
ಇಳಕಲ್ನ ಮಹಾಂತ ಗಂಗೋತ್ರಿ ಆವರಣದ ಎಸ್. ಆರ್. ಕಂಠಿ ಸಭಾಂಗಣದಲ್ಲಿ ಶ್ರೀ ವಿಜಯ ಮಹಾಂತೇಶ ಕಲೆ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ಜರುಗಿತು. ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಈ ಸಮಾರಂಭದ ದಿವ್ಯ ಸಾನ್ನಿಧ್ಯ ಹಾಗೂ ಅಧ್ಯಕ್ಷತೆಯನ್ನು ಚಿತ್ತರಗಿ ಶ್ರೀ ವಿಜಯ ಮಹಾಂತೇಶ ಸಂಸ್ಥಾನಮಠದ ಪೂಜ್ಯ ಶ್ರೀ ಡಾ. ಗುರುಮಹಾಂತ ಸ್ವಾಮೀಜಿ ವಹಿಸಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು.
ಬೆಂಗಳೂರಿನ ಹಿರಿಯ ಸಾಹಿತಿ ಡಾ. ವಿಜಯಶ್ರೀ ಸಬರದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಉನ್ನತ ಶಿಕ್ಷಣ ಸಂಸ್ಥೆಗಳು ಯುವತಿಯರ ಪ್ರತಿಭೆ, ಸೃಜನಶೀಲತೆ ಮತ್ತು ನಾಯಕತ್ವದ ಗುಣಗಳನ್ನು ಹೊರತರುವ ಪ್ರಮುಖ ವೇದಿಕೆಗಳಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಬೆಳೆಯಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಸಾಹಿತಿ ಡಾ. ಬಸವರಾಜ ಸಬರದ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಭವಿಷ್ಯದ ದೇಶದ ನಿರ್ಮಾತೃಗಳಾಗಿದ್ದಾರೆ. ಶಿಕ್ಷಣದ ಜೊತೆಗೆ ಉತ್ತಮ ನೈತಿಕ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸ ಹಾಗೂಸಾಮಾಜಿಕ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ಸಲಹೆ ನೀಡಿದರು.
ಇಳಕಲ್ ಮತ್ತು ಸುತ್ತಮುತ್ತಲಿನ ಭಾಗದ ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ಪ್ರಗತಿಯೊಂದಿಗೆ ನಾಯಕತ್ವ ತರಬೇತಿ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಒದಗಿಸುವಲ್ಲಿ ಈ ಸಂಸ್ಥೆ ನಿರಂತರ ಶ್ರಮಿಸುತ್ತಿದ್ದು, ಈ ಒಕ್ಕೂಟದ ಚಟುವಟಿಕೆಗಳು ಯುವತಿಯರ ಸರ್ವಾಂಗೀಣ ವಿಕಸನಕ್ಕೆ ಸಹಕಾರಿಯಾಗಲಿವೆ.


