
ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್: ಕ್ರೈಸ್ಟ್ ಕಿಂಗ್ ಕಾಲೇಜು ಬಾಲಕಿಯರ ತಂಡಕ್ಕೆ ಪ್ರಶಸ್ತಿ
ಕಾರ್ಕಳ ತಾಲೂಕು ಸಾಣೂರಿನ ರಾಜೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ತಾಲೂಕು ಮಟ್ಟದ ಪಿಯುಸಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಭರ್ಜರಿ ಜಯಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪ್ರಶಸ್ತಿಯೊಂದಿಗೆ ಬಾಲಕಿಯರ ತಂಡವು ಮುಂಬರುವ ಉಡುಪಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದೆ.
ವಿಜೇತ ತಂಡವನ್ನು ಪ್ರತಿನಿಧಿಸಿದ ಆರು ಮಂದಿ ಕ್ರೀಡಾಪಟುಗಳು ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಶ್ರಾವ್ಯಾ ಶೆಟ್ಟಿ ಹಾಗೂ ಜಿ. ಪ್ರೀತಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಕ್ಷಾ, ಪ್ರಥಮ ಪಿಯುಸಿಯ ರಫಿಯಾ ಬಾನು, ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸಾಂಚಿ ರಾವ್ ಮತ್ತು ರಕ್ಷಿತಾ ಅವರು ಜಿಲ್ಲಾಮಟ್ಟದಲ್ಲಿ ಕಾರ್ಕಳ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.
ಅಲ್ಲದೆ, ಬಾಲಕರ ವಿಭಾಗದಲ್ಲಿಯೂ ಕ್ರೈಸ್ಟ್ ಕಿಂಗ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರಾವಣ್, ಶ್ರೀರಿಷಿ ಮತ್ತು ಶಶಾಂತ್ ಅವರು ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಸಾಣೂರಿನಲ್ಲಿ ನಡೆದ ಈ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ತರಬೇತಿ ನೀಡಿದ ಕ್ರೀಡಾ ಶಿಕ್ಷಕರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.


