
ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ಖಂಡಿಸಿ ಕುಶಾಲನಗರದಲ್ಲಿ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ಸುಳ್ಳು ಎಫ್ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಕುಶಾಲನಗರ ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹಾಗೂ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೊಯಿನ್ಸ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಅಡಗಿಸಲು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲ್ದ್ವಾನಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ಕೊಡಗು ಜಿಲ್ಲಾದ್ಯಂತ ಉಗ್ರ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು. ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.


