
ಟಿವಿ9 ಇಂಪ್ಯಾಕ್ಟ್: ಕಾಗವಾಡ ತಾಲೂಕಿನ ಹಣಮಾಪುರದಲ್ಲಿ 8 ವರ್ಷದ ಸಮಸ್ಯೆಗೆ ಹತ್ತೇ ದಿನಗಳಲ್ಲಿ ಸಿಕ್ಕಿತು ಹೊಸ ಸೇತುವೆ
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಹಣಮಾಪುರ ಗ್ರಾಮದ ಒಡೆಯರ್ ತೋಟ ಪ್ರದೇಶದ ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಕಳೆದ ಎಂಟು ವರ್ಷಗಳಿಂದ ಮಳೆಗಾಲದಲ್ಲಿ ಭಾರೀ ಸಂಕಷ್ಟ ಎದುರಿಸುತ್ತಿದ್ದರು. ಬಸವೇಶ್ವರ ಏತ ನೀರಾವರಿ ಯೋಜನೆಯಿಂದ ನೀರು ಹರಿದು ಬಂದಾಗ ಹಾಗೂ ಮಳೆಯಿಂದಾಗಿ ಸ್ಥಳೀಯ ಹಳ್ಳ ತುಂಬಿ ಹರಿಯುತ್ತಿತ್ತು. ಇದರಿಂದ ಗ್ರಾಮ ಸಂಪರ್ಕಿಸುವ ಮುಖ್ಯ ರಸ್ತೆ ನೀರಿನಲ್ಲಿ ಮುಳುಗಿ, ವಿದ್ಯಾರ್ಥಿಗಳು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ತುಂಬಿ ಹರಿಯುವ ಹಳ್ಳದಲ್ಲಿಯೇ ಶಾಲೆಗೆ ತೆರಳಬೇಕಾದ ದುಸ್ಥಿತಿ ಇತ್ತು.
ಸ್ಥಳೀಯರ ಮತ್ತು ಶಾಲಾ ಮಕ್ಕಳ ಈ ಪರದಾಟದ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ತಕ್ಷಣವೇ ಸ್ಥಳೀಯ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡರು. ಸುಮಾರು ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೇವಲ ಹತ್ತೇ ದಿನಗಳಲ್ಲಿ ಹಳ್ಳಕ್ಕೆ ಸೇತುವೆ ನಿರ್ಮಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ನೂತನ ಸೇತುವೆ ನಿರ್ಮಾಣದಿಂದ ಹಣಮಾಪುರ ಗ್ರಾಮದ 200ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ನೂರಾರು ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲೂ ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.



Comments0
Loading comments…